ಸಂಭಲ್(ಉತ್ತರ ಪ್ರದೇಶ): ಶಾಹಿ ಜಾಮಾ ಮಸೀದಿಯ ಅಧ್ಯಕ್ಷ ಜಾಫರ್ ಅಲಿ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ. ಅವರು ರೆಗ್ಯುಲರ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 2ಕ್ಕೆ ನಿಗದಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿರ್ಭಯ್ ನಾರಾಯಣ್ ರಾಯ್ ಅವರು, ಅದನ್ನು ವಜಾಗೊಳಿಸಿದರು ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಹರಿ ಓಂ ಪ್ರಕಾಶ್ ಸೈನಿ ತಿಳಿಸಿದ್ದಾರೆ.

ಅಲಿ ಅವರಿಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಅಲಿ ಅವರ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡಿದ, ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಸತ್ಯವನ್ನು ತಿರುಚಿದ ಆರೋಪಗಳು ಇವೆ ಎಂದು ಪ್ರಾಸಿಕ್ಯೂಷನ್ ಹೇಳಿತು.

ಅಲಿ ಅವರನ್ನು ಮಾರ್ಚ್ 23ರಂದು ಬಂಧಿಸಲಾಗಿದೆ. ಮೊಘಲರ ಕಾಲದ ಮಸೀದಿಯಲ್ಲಿ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಸಮೀಕ್ಷೆ ನಡೆಸುವುದನ್ನು ವಿರೋಧಿಸಿ ನವೆಂಬರ್ 24ರಂದು ನಡೆದ ಪ್ರತಿಭಟನೆಯ ವೇಳೆ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅವರ ಬಂಧನ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.