ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಧಿಸೂಚನೆ: ಸರ್ಕಾರಕ್ಕೆ ನಿರ್ದೇಶನ ನೀಡಲಾಗದು– ಸುಪ್ರೀಂ ಕೋರ್ಟ್

Published 22 ಜನವರಿ 2024, 14:25 IST
Last Updated 22 ಜನವರಿ 2024, 14:25 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ ಅಂಗೀಕರಿಸಿರುವ ಮಸೂದೆಗೆ ಕಾಯ್ದೆ ರೂಪ ನೀಡಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ ಕುರಿತ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸೀಮಾ ಬಿ. ಖಯ್ಯುಮ್‌ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತ ಅರ್ಜಿಯನ್ನು (ಪಿಐಎಲ್‌) ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಮನೋಜ್‌ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಸತ್ ಅಂಗೀಕರಿಸಿರುವ ಕಾನೂನಿನ ಕುರಿತು ಅಧಿಸೂಚನೆ ಹೊರಡಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರ ಮತ್ತು ಇದು ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT