ನವದೆಹಲಿ: ಅನಧಿಕೃತ ನಿರ್ಮಾಣಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಲಯಗಳು ‘ಕಠಿಣವಾದ ನಿಲುವನ್ನು’ ತೋರಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಇಂತಹ ನಿರ್ಮಾಣಗಳನ್ನು ನ್ಯಾಯಾಲಯಗಳು ಸಕ್ರಮಗೊಳಿಸಲು ಮುಂದಾಗಬಾರದು ಎಂಬ ಕಿವಿಮಾತು ಹೇಳಿದೆ.

ನಿಬಂಧನೆಗಳನ್ನು ಉಲ್ಲಂಘಿಸುವವರ ರಕ್ಷಣೆಗೆ ಕಾನೂನು ಮುಂದಾಗಬಾರದು. ಅಂಥವರ ರಕ್ಷಣೆಗೆ ಮುಂದಾದಲ್ಲಿ, ‘ತಮ್ಮನ್ನು ಪ್ರಶ್ನಿಸುವವರು ಯಾರೂ ಇಲ್ಲ ಎಂದು ಭಾವಿಸುವುದು ಹೆಚ್ಚಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.

ಅನಧಿಕೃತ ನಿರ್ಮಾಣಕ್ಕೆ ಸಂಬಂಧಿಸಿದ ಅರ್ಜಿಯ ಕುರಿತಾಗಿ ಕಲ್ಕತ್ತ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ವಜಾಗೊಳಿಸಿದೆ. ಅನಧಿಕೃತ ಕಟ್ಟಡಗಳನ್ನು ಧ್ವಂಸಗೊಳಿಸುವ ಪ್ರಕ್ರಿಯೆ ಆರಂಭಿಸುವಂತೆ ಕೋಲ್ಕತ್ತ ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.