ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆ

Published 9 ಮೇ 2023, 5:55 IST
Last Updated 9 ಮೇ 2023, 5:55 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ 1,331 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ರಿಂದ 22,742 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ಮಂಗಳವಾರ ತಿಳಿಸಿದೆ.

ಈವರೆಗಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.49 ಕೋಟಿ (4,49,72,800) ಆಗಿದೆ. 24 ಗಂಟೆಗಳಲ್ಲಿ 11 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,31,707 ಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ಕೋವಿಡ್‌ ಚೇತರಿಕೆ ದರವು ಶೇಕಡಾ 98.76 ರಷ್ಟಿದ್ದು, ಇದುವರೆಗೆ ರೋಗದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,44,18,351ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿನಿಂದ ಸಾವಿನ ಪ್ರಮಾಣವು ಶೇ 1.18 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಾದ್ಯಂತ 220.66 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT