ನವದೆಹಲಿ: ಕಳೆದ ಒಂದು ತಿಂಗಳಿಂದ ಸಾರ್ವಜನಿಕರ ಆತಂಕ ಹೆಚ್ಚಿಸಿರುವ ಕೊರೊನಾ ದ್ವಿತೀಯ ಅಲೆಯು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಯಂತ್ರಣಕ್ಕೆ ಬರಲಾರಂಭಿಸಿದೆ. ಗುರುವಾರ ಕೊರೊನಾ ಸೋಂಕು ದೃಢಪಟ್ಟವರ ಪ್ರಮಾಣದಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ.

ಸತತ 4ನೇ ವಾರ ಲಾಕ್‌ಡೌನ್ ಮುಂದುವರಿದಿರುವ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ ಶೇ 15ಕ್ಕಿಂತ ಕಡಿಮೆ ದಾಖಲಾಗಿದೆ.

ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತ ಸಾಗಿರುವುದು ಸಾರ್ವಜನಿಕರ ಆತಂಕವನ್ನು ಕೊಂಚ ಮಟ್ಟಿಗೆ ಕಡಿಮೆ ಮಾಡಿದೆ.

ಗುರುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಗಾಗಿರುವ 73,675 ಜನರ ಪೈಕಿ 10,489 (ಶೇ 14.24) ಜನರಲ್ಲಿ ಸೋಂಕು ದೃಢಪಟ್ಟಿದೆ. 15,189 ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 77,717ಕ್ಕೆ ಇಳಿದಿದೆ.

ಇದೇ ಅವಧಿಯಲ್ಲಿ ಕೊರೊನಾದಿಂದ ಬಳಲುತ್ತಿದ್ದ 308 ಜನ ಸಾವಿಗೀಡಾಗಿದ್ದು, ಇದುವರೆಗೆ 20,618 ಜನ ಕೊರೊನಾದಿಂದ ಪ್ರಾಣ ಕಳೆದುಕೊಂಡಂತಾಗಿದೆ. ಪ್ರತಿ 100 ಜನ ಸೋಂಕಿತರಲ್ಲಿ 1.50ರಷ್ಟು ಮರಣ ಪ್ರಮಾಣ ದಾಖಲಾಗಿದೆ.

2020ರ ಮಾರ್ಚ್‌ನಿಂದ ನಗರದಾದ್ಯಂತ ಒಟ್ಟು 13,72,475 ಜನ ಸೋಂಕಿಗೆ ಒಳಗಾಗಿದ್ದು, 12,74,140 ಜನ ಗುಣಮುಖರಾಗಿದ್ದಾರೆ.

ಲಾಕ್‌ಡೌನ್‌ನಿಂದ ನಿಯಂತ್ರಣ:ನಗರದಲ್ಲಿ ಏಪ್ರಿಲ್ 19ರಿಂದ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಲಾಕ್‌ಡೌನ್ ಘೋಷಣೆಯ 4ನೇ ವಾರದಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದೆ.

ಲಾಕ್‌ಡೌನ್ ಅವಧಿಯಲ್ಲಿ ದಿನಸಿ, ತರಕಾರಿ, ಹಾಲು, ಹಣ್ಣು ಮತ್ತು ಔಷಧ ಅಂಗಡಿ ಹೊರತುಪಡಿಸಿ ಯಾವುದೇ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿಲ್ಲ. ಅಲ್ಲದೆ, ಸಾರ್ವಜನಿಕ ಸಾರಿಗೆ ಸೌಲಭ್ಯಗಳಾದ ಮೆಟ್ರೋ, ನಗರ ಸಾರಿಗೆ ಬಸ್ ಸಂಚಾರ, ಆಟೊ ರಿಕ್ಷಾಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕೊರೊನಾ ಪರೀಕ್ಷೆಗೆ ಒಳಪಟ್ಟವರ ಪೈಕಿ, ಶೇ 36ರಷ್ಟು ಜನರಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳು ಬೆಳಕಿಗೆ ಬಂದಿದ್ದವಲ್ಲದೆ, ಆಸ್ಪತ್ರೆಗಳಲ್ಲಿ ಹಾಸಿಗೆ ದೊರೆಯದೇ ಸಾವಿರಾರು ರೋಗಿಗಳು ಪರದಾಡಿದ ಬೆಳವಣಿಗೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.