ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಒಂದೇ ದಿನ 19,906 ಜನರಿಗೆ ಸೋಂಕು, 410 ಸಾವು

ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 19,906 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 410 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 5,28,859ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 16,095ಕ್ಕೆ ಏರಿಕೆಯಾಗಿದೆ.

ಸದ್ಯ 2,03,051 ಪ್ರಕರಣಗಳು ಸಕ್ರಿಯವಾಗಿದ್ದು, 3,09,713 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,59,133 ಪ್ರಕರಣಗಳು ಬೆಳಕಿಗೆ ಬಂದಿದ್ದು, 67,615 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 84,245 ಮಂದಿ ಗುಣಮುಖರಾಗಿದ್ದು, 7,273 ಜನರು ಮೃತರಾಗಿದ್ದಾರೆ.
ಗುಜರಾತ್‌ನಲ್ಲಿ ಒಟ್ಟಾರೆ 30,709 ಜನರಿಗೆ ಸೋಂಕು ತಗುಲಿದೆ. 6,511 ಸಕ್ರಿಯ ಪ್ರಕರಣಗಳಿದ್ದು, 22,409 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,789 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 80,188 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 28,329 ಸಕ್ರಿಯ ಪ್ರಕರಣಗಳಿದ್ದು, 49,301 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,558 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 78,335 ಮಂದಿಗೆ ಸೋಂಕು ತಗುಲಿದ್ದು, 33,216 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 44,094 ಗುಣಮುಖರಾಗಿದ್ದು, 1,025 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 550, ಪಶ್ಚಿಮ ಬಂಗಾಳದಲ್ಲಿ 629, ಉತ್ತರ ಪ್ರದೇಶದಲ್ಲಿ 649 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT