ನವದೆಹಲಿ: ಕಳೆದ 24 ಗಂಟೆಗಳಲ್ಲಿ ಹೊಸದಾಗಿ ಕೋವಿಡ್–19 ದೃಢಪಟ್ಟ 2,380 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ13,433ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಕಾಣಿಸಿಕೊಂಡಾಗಿನಿಂದ ಇದುವರೆಗೆ ಒಟ್ಟು4,30,49,974 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಇಂದು (ಗುರುವಾರ) ಬೆಳಗ್ಗೆ 8ಕ್ಕೆ ಕೊನೆಗೊಂಡಂತೆಕಳೆದ 24 ಗಂಟೆಗಳಲ್ಲಿ 56 ಸೋಂಕಿತರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಒಟ್ಟು 5,22,062ಕ್ಕೆ ತಲುಪಿದೆ.

ಈವರೆಗೆ ವರದಿಯಾಗಿರುವ ಒಟ್ಟು ಪ್ರಕರಣಗಳ ಪೈಕಿಸಕ್ರಿಯ ಪ್ರಕರಣಗಳ ಪ್ರಮಾಣ ಶೇ0.03 ರಷ್ಟಿದೆ. ಚೇತರಿಕೆ ಪ್ರಮಾಣ ಶೇ 98.76ರಷ್ಟಿದೆ ಎಂದೂ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:ಕೋವಿಡ್ | ಮೂರು ತಿಂಗಳಲ್ಲಿ ಮೊದಲ ಬಾರಿಗೆ 1ರ ಗಡಿ ದಾಟಿದ ಹರಡುವಿಕೆ ಪ್ರಮಾಣ

ದೇಶದಲ್ಲಿ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್ 7ರಂದು 20 ಲಕ್ಷದ ಗಡಿ ದಾಟಿತ್ತು. ಈ ಸಂಖ್ಯೆ ಅದೇ ವರ್ಷ ಆಗಸ್ಟ್ 23ರಂದು 30ಲಕ್ಷಕ್ಕೆ, ಸೆಪ್ಟೆಂಬರ್ 5ರಂದು 50 ಲಕ್ಷಕ್ಕೆ ಏರಿಕೆಯಾಗಿತ್ತು. ಡಿಸೆಂಬರ್ 19ರಂದು ಒಂದು ಕೋಟಿಗೆ ಏರಿತ್ತು.

ಕಳೆದ ವರ್ಷದ (2021) ಮಾರ್ಚ್ 4ರಂದು ಎರಡು ಕೋಟಿ ಹಾಗೂ ಜೂನ್ 23ರಂದು ಮೂರು ಕೋಟಿ ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜನವರಿ 26ರಂದು 4 ಕೋಟಿ ಗಡಿ ದಾಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.