ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 628 ಹೊಸ ಕೋವಿಡ್‌ ಕೇಸ್‌ ಪತ್ತೆ: 4,054ಕ್ಕೇರಿದ ಸಕ್ರಿಯ ಪ್ರಕರಣ

Published 25 ಡಿಸೆಂಬರ್ 2023, 7:37 IST
Last Updated 25 ಡಿಸೆಂಬರ್ 2023, 7:37 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಕೋವಿಡ್‌–19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಈವರೆಗೆ 5.33 ಲಕ್ಷ ಮಂದಿ ಮೃತಪಟ್ಟಿದ್ದು, 4.44 ಕೋಟಿ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂತರ್ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT