ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 3.34 ಕೋಟಿ ಜನರ ಮಾದರಿ ಪರೀಕ್ಷೆ, 29 ಲಕ್ಷ ಸೋಂಕಿತರು

Last Updated 21 ಆಗಸ್ಟ್ 2020, 5:11 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 68,898 ಹೊಸ ಪ್ರಕರಣಗಳು ದಾಖಲಾಗಿದ್ದು 983 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,92,028ಕ್ಕೆ ಏರಿಕೆಯಾಗಿದೆ.

ಒಟ್ಟು 29,05,824 ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಪೈಕಿ ಈವರೆಗೂ 21,58,947 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 54, 849 ಮಂದಿ ಸಾವಿಗೀಡಾಗಿದ್ದಾರೆ.

ಗುರುವಾರ 8,05,985ಗಂಟಲು ಮಾದರಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 3,34,67,237 ಮಾದರಿಗಳ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT