ನವದೆಹಲಿ:ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 4,259 ಹೊಸ ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, 80 ಸೋಂಕಿತರು ಮೃತಪಟ್ಟಿದ್ದಾರೆ.

ಈ ವರೆಗೂ ಮಹಾರಾಷ್ಟ್ರದಲ್ಲಿ ಒಟ್ಟು 18,76,699 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 17,53,922 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಇಂದು 1,218 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,296 ಮಂದಿ ಗುಣಮುಖರಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 7,75,602ಕ್ಕೆ ತಲುಪಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1935 ಹೊಸ ಪ್ರಕರಣಗಳು ದಾಖಲಾಗಿದ್ದು, 47 ಸೋಂಕಿತರು ಮೃತರಾಗಿದ್ದಾರೆ. ಈ ವರೆಗೆ 5,78,116 ಸೋಂಕಿತರು ಚೇತರಿಸಿಕೊಂಡಿದ್ದು, 9981 ಮಂದಿ ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಗುಜರಾತ್‌ನಲ್ಲಿ 1,203 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 12 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 1,203 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 11 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆಯಾಗಿದೆ. ಸದ್ಯ 3,59,819 ಸಕ್ರಿಯ ಪ್ರಕರಣಗಳಿವೆ. ಇದು ಕಳೆದ ಸುಮಾರು 145 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಜುಲೈ 18ರಂದು ಒಟ್ಟು ಸಕ್ರಿಯ ಪ್ರಕರಣಗಳು 3,58,692ರಷ್ಟಿದ್ದವು.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 30,005 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 98,26,775 ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಒಂದೇ ದಿನ 442 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು 1,42,628 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 33,494 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿದವರ ಒಟ್ಟು ಸಂಖ್ಯೆ 93,24,328 ಆಗಿದೆ.

ಮಹಾರಾಷ್ಟ್ರದಲ್ಲಿ 74,408 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲೇ ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯವಾಗಿದೆ ಮಹಾರಾಷ್ಟ್ರ. ನಂತರದ ಸ್ಥಾನದಲ್ಲಿ ಕೇರಳ ಇದ್ದು, ಅಲ್ಲಿ 59,528 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.