ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದಿನವೊಂದರ ಗರಿಷ್ಠ, 1,31,968 ಕೋವಿಡ್ ಪ್ರಕರಣಗಳು ವರದಿಯಾಗಿವೆ. 780 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 1.3 ಕೋಟಿ ದಾಟಿದ್ದು, 1,67,642 ಮಂದಿ ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಸದ್ಯ ದೇಶದಲ್ಲಿ 9,79,608 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಸೋಂಕಿನ ಶೇ 7.04ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 91.67ಕ್ಕೆ ಇಳಿಕೆಯಾಗಿದೆ. ಈವರೆಗೆ 1.19 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ಓದಿ:Covid-19 World Update: ಬ್ರೆಜಿಲ್, ಅಮೆರಿಕ ಸೇರಿ ಜಗತ್ತಿನಾದ್ಯಂತ ಸಾವು ಹೆಚ್ಚಳ

ದೇಶದಲ್ಲಿ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದ್ದಾರೆ. ಏಪ್ರಿಲ್ 11ರಿಂದ 14ರ ವರೆಗೂ 'ಲಸಿಕೆ ಉತ್ಸವ' ನಡೆಸುವಂತೆಯೂ ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.