ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಸೋಮವಾರ ಚಾಲನೆ ದೊರಕಿದೆ. ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಸಿಕೊಂಡರು.

ಭಾರತೀಯ ವೈದ್ಯಕೀಯ ಪರಿಷತ್ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು.

ಇದನ್ನೂ ಓದಿ:ದೇಶೀಯ ಕೋವಿಡ್ ಲಸಿಕೆ 'ಕೊವ್ಯಾಕ್ಸಿನ್' ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ಈ ನಡುವೆ ದೇಶದಲ್ಲಿ ಹೊಸದಾಗಿ 15,510 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ತಾಸಿನಲ್ಲಿ 106 ಮಂದಿ ಮೃತಪಟ್ಟಿದ್ದು, ಕೊರೊನಾ ವೈರಸ್ ಒಟ್ಟು ಸಾವಿನ ಸಂಖ್ಯೆ 1,57,157ಕ್ಕೆ ತಲುಪಿದೆ.

ಭಾರತದಲ್ಲಿ 1,68,627 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ 1,07,86,457 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ:Explainer | ಕೋವಿಡ್ ಲಸಿಕೆ 2.0: ಹೆಸರು ನೋಂದಣಿ, ಲಸಿಕೆ ಪಡೆಯುವುದುಹೇಗೆ?

ಅಂದ ಹಾಗೆ ದೇಶದಲ್ಲಿ ಕೊರೊನಾ ವೈರಸ್ ಒಟ್ಟು ಪ್ರಕರಣಗಳ ಸಂಖ್ಯೆ 1,10,96,731ಕ್ಕೆ ತಲುಪಿದೆ.

ಏತನ್ಮಧ್ಯೆ ದೇಶದಲ್ಲಿ ಇದುವರೆಗೆ 1,43,01,266 ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕೋವಿಡ್-19 ಅಂಕಿಅಂಶ:
ಒಟ್ಟು ಪ್ರಕರಣ: 1,10,96,731
ಗುಣಮುಖ: 1,07,86,457
ಮೃತರ ಸಂಖ್ಯೆ: 1,57,157
ಸಕ್ರಿಯ ಪ್ರಕರಣ: 1,68,627

ಒಟ್ಟು ಕೋವಿಡ್-19 ಲಸಿಕೆ ವಿತರಣೆ: 1,43,01,266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.