ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ18,346 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 209 ದಿನಗಳಲ್ಲಿ ದಾಖಲಾದ ಕನಿಷ್ಠ ಪ್ರಕರಣಗಳ ಸಂಖ್ಯೆ ಇದಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ 201 ದಿನಗಳಲ್ಲೇ ಕನಿಷ್ಠವಾದ 2,52,902ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್‌ನಿಂದಾಗಿ ಒಂದು ದಿನದಲ್ಲಿ 263 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಮೃತರ ಸಂಖ್ಯೆ4,49,260ಕ್ಕೆ ಏರಿಕೆಯಾಗಿದೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ3,38,53,048 ಆಗಿದೆ.

ಕಳೆದ 11 ದಿನಗಳಿಂದೀಚೆಗೆ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆಯೇ ಇದೆ. ದೈನಂದಿನ ಪಾಸಿಟಿವಿಟಿ ದರ ಶೇ 1.61ರಷ್ಟಿದ್ದು, ಕಳೆದ 101 ದಿನಗಳಿಂದೀಚೆಗೆ ಶೇ 3ಕ್ಕಿಂತ ಕಡಿಮೆ ಪ್ರಮಾಣದಲ್ಲೇ ಇದೆ.

ದೇಶದಾದ್ಯಂತ ಲಸಿಕೆ ನೀಡಿಕೆ ಪ್ರಮಾಣ 91.54 ಕೋಟಿ ಡೋಸ್ ಮೀರಿದೆ ಎಂದು ತಿಳಿಸಲಾಗಿದೆ.

ದೇಶದಲ್ಲಿ ಕೋವಿಡ್‌ನಿಂದ ಒಟ್ಟು ಮೃತಪಟ್ಟವರ ಪೈಕಿ ಮಹಾರಾಷ್ಟ್ರವೊಂದರಲ್ಲೇ1,39,233 ಮಂದಿ ಮೃತಪಟ್ಟಿದ್ದು, ಕರ್ನಾಟಕದಲ್ಲಿ 37,832 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.