ಮುಂಬೈ: ಮಹಾರಾಷ್ಟ್ರದ 61ನೇ ಸಂಸ್ಥಾಪನಾ ದಿನವನ್ನು ಶನಿವಾರ ಸರಳವಾಗಿ ಆಚರಿಸಲಾಯಿತು.

ಕೋವಿಡ್–19 ಪಿಡುಗಿನಿಂದಾಗಿ ಸತತ ಎರಡನೇ ವರ್ಷ ಸಂಸ್ಥಾಪನಾ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ.

ಸಚಿವಾಲಯದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಛತ್ರಪತಿ ಶಿವಾಜಿ ಮಹಾರಾಜ್, ಅವರ ತಾಯಿ ಜೀಜಾಬಾಯಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಅವರು ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಕಂದಾಯ ಸಚಿವ ಬಾಳಾಸಾಹೇಬ್ ಥೋರಟ್ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ದಕ್ಷಿಣ ಮುಂಬೈನಲ್ಲಿರುವ ಹುತಾತ್ಮ ಚೌಕ್‌ಗೆ ಉದ್ಧವ್ ಠಾಕ್ರೆ ಭೇಟಿ ನೀಡಿ, ಮಹಾರಾಷ್ಟ್ರ ಏಕೀಕರಣಕ್ಕಾಗಿ ಹೋರಾಡಿದ 105 ಹುತಾತ್ಮರಿಗೆ ಗೌರವ ಸಲ್ಲಿಸಿದರು.

ರಾಜ್ಯದ ಇತರೆ ಜಿಲ್ಲೆಗಳಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಮಹಾರಾಷ್ಟ್ರ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.