ಭೋಪಾಲ್: ಕೋವಿಡ್–19 ದೃಢಪಟ್ಟಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಅದರಲ್ಲೂ ಪಾಸಿಟಿವ್ ಬಂದಿದೆ. ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಯಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕೋವಿಡ್ ದೃಢಪಟ್ಟ ಕಾರಣ ಜುಲೈ 25ರಂದು ಚೌಹಾಣ್ ಭೋಪಾಲ್‌ನ ಚಿರಾಯು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘9ನೇ ದಿನ ನಡೆಸಿದ ಚೌಹಾಣ್ ಅವರ ಆರ್‌ಟಿ–ಪಿಸಿಆರ್ ಪರೀಕ್ಷೆ ಹಾಗೂ ಸಾರ್ಸ್ ಕೋವಿಡ್–2 ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ’ ಎಂದು ಆಸ್ಪತ್ರೆಯು ಆರೋಗ್ಯ ಪ್ರಕಟಣೆಯಲ್ಲಿ ತಿಳಿಸಿದೆ.

‘ತಾನು ಆರೋಗ್ಯವಾಗಿದ್ದೇನೆ ಹಾಗೂ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ. ಪರೀಕ್ಷೆಗಾಗಿ ಗಂಟಲ ದ್ರವದ ಮಾದರಿಯನ್ನು ಕಳುಹಿಸಲಾಗಿದೆ. ವರದಿ ನೆಗೆಟಿವ್ ಬಂದರೆ ಆಸ್ಪತ್ರೆಯಿಂದ ಮನೆಗೆ ತೆರಳುವುದಾಗಿ’ಭಾನುವಾರ ಚೌಹಾಣ್ ಟ್ವೀಟ್ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.