ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿವೆ. ಶುಕ್ರವಾರ ಸಂಜೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲೇ ಅತಿ ಹೆಚ್ಚು 20,971 ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 8,74,780ಕ್ಕೆ ಏರಿಕೆಯಾಗಿದೆ. ಈ ಪೈಕಿ ಶೇ 84 ಮಂದಿಯಲ್ಲಿ ರೋಗ ಲಕ್ಷಣ ಕಂಡುಬಂದಿಲ್ಲ ಎಂಬುದು ಗಮನಾರ್ಹವೆನಿಸುತ್ತದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 91,731ಕ್ಕೆ ಏರಿಕೆ ಕಂಡಿವೆ. ಈ ಅವಧಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ... Covid-19 Karnataka Update: 8,449 ಹೊಸ ಪ್ರಕರಣ, 4 ಮಂದಿ ಸೋಂಕಿತರು ಸಾವು

8,490 ಮಂದಿ ಗುಣಮುಖರಾಗಿದ್ದಾರೆ. ಹಾಗೆಯೇ ಇಂದು 1,395 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈನಲ್ಲಿ ಗುರುವಾರದಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

ಮುಂಬೈನಲ್ಲಿ ಸಂಪೂರ್ಣ ಲಾಕ್ಡೌನ್ ಹೇರಲಾಗುವುದೇ ಎಂಬುದರ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.