ಮುಂಬೈ: ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ಸೋಂಕಿನಿಂದಮುಂಬೈನಲ್ಲಿ ಮೊದಲ ಸಾವಿನ ಪ್ರಕರಣ ವರದಿಯಾಗಿದೆ.

ಒಟ್ಟಾರೆಯಾಗಿ ಡೆಲ್ಟಾ ಪ್ಲಸ್ ತಳಿಯಿಂದ ಮಹಾರಾಷ್ಟ್ರದಲ್ಲಿ ವರದಿಯಾದ ಎರಡನೇ ಸಾವಿನ ಪ್ರಕರಣ ಇದಾಗಿದೆ.

ಜುಲೈ ತಿಂಗಳಲ್ಲಿ ಎರಡು ಡೋಸ್ ಲಸಿಕೆ ಹಾಕಿಸಿದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ:Covid-19 India Update: 40,120 ಪ್ರಕರಣ ದೃಢ, 585 ಸಾವು

ಮಹಿಳೆಯ ನಿಕಟ ಸಂಪರ್ಕದಲ್ಲಿದ್ದ ಆರು ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಈ ಪೈಕಿ ಇಬ್ಬರಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ದೃಢಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜುಲೈ 13ರಂದು ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಗೆಮೊದಲಸಾವಿನ ಪ್ರಕರಣವರದಿಯಾಗಿತ್ತು. 80 ವರ್ಷದ ಮಹಿಳೆ ಮೃತಪಟ್ಟಿದ್ದರು. ಈಗ ಪೂರ್ವ ಮುಂಬೈನಲ್ಲಿ ತೀವ್ರಾ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಜುಲೈ 27ರಂದು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.