ಆತಂಕ ಬೇಡ
‘ಜೆನ್.1’ ಉಪತಳಿಗೆ ಸಂಬಂಧಿಸಿದ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಜನರು ಆತಂಕಪಡಬೇಕಿಲ್ಲ ಎಂದು ದೆಹಲಿಯ ವೈದ್ಯರು ಸಲಹೆ ನೀಡಿದ್ದಾರೆ. ಈ ಉಪತಳಿಯು ಅಪಾಯಕಾರಿಯಲ್ಲ ಮತ್ತು ಹೆಚ್ಚಿನ ರೋಗಿಗಳಲ್ಲಿ ಸೌಮ್ಯ ಲಕ್ಷಣಗಳು ಮಾತ್ರ ಕಂಡುಬಂದಿವೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಈಚೆಗೆ ದೃಢಪಟ್ಟ ಎಲ್ಲ 23 ಪ್ರಕರಣಗಳಲ್ಲಿ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ. ಇದರಲ್ಲಿ 22 ಮಂದಿ ಚೇತರಿಸಿಕೊಳ್ಳುತ್ತಿದ್ದು, ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ದೆಹಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.