ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಉಪತಳಿ ಜೆಎನ್‌–1 ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ: ಐಎನ್‌ಎಸ್‌ಎಸಿಒಜಿ

Published 19 ಡಿಸೆಂಬರ್ 2023, 5:10 IST
Last Updated 19 ಡಿಸೆಂಬರ್ 2023, 5:10 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನ ಉಪತಳಿ ಜೆಎನ್‌–1 ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ (ಐಎನ್‌ಎಸ್‌ಎಸಿಒಜಿ) ಮುಖ್ಯಸ್ಥ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ.

ಕೇರಳದಲ್ಲಿ ಮೃತಪಟ್ಟ ವ್ಯಕ್ತಿ ಕೇವಲ ವೈರಸ್ ಸೋಂಕಿನಿಂದ ಮೃತಪಟ್ಟಿಲ್ಲ. ಆತನಿಗೆ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು ಎಂದು ಅವರು ಹೇಳಿದ್ದಾರೆ.

‘ಮೃತ ವ್ಯಕ್ತಿಯು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೇವಲ ಜೆಎನ್‌.1 ಸೋಂಕಿನಿಂದ ಅಲ್ಲ’ ಎಂದು ಅರೋರಾ ನುಡಿದಿದ್ದಾರೆ.

ಈ ಉಪತಳಿ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೋಂಕಿತರ ಮಾದರಿಗಳ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ಎಲ್ಲ ರಾಜ್ಯಗಳಿಂದ ಮಾದರಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಕೊರೊನಾ ವೈರಾಣುವಿನ ಜೆಎನ್‌.1 ಉಪತಳಿಯ ಮೊದಲ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್‌ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

ಈ ಮಧ್ಯೆ, ‘60 ವರ್ಷ ತುಂಬಿದವರು, ಹೃದಯ ಸಂಬಂಧಿ ಕಾಯಿಲೆ ಹಾಗೂ ಕೋವಿಡ್–19 ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಈ ಬಗ್ಗೆ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಲಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT