ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid Update: ದೇಶದಲ್ಲಿ 2.64 ಲಕ್ಷ ಹೊಸ ಪ್ರಕರಣ

Last Updated 14 ಜನವರಿ 2022, 20:18 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,64,202 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇದು 239 ದಿನಗಳಲ್ಲಿ ದಾಖಲಾದ ಹೆಚ್ಚು ಪ್ರಕರಣಗಳಾಗಿವೆ.

ಇದೇ ಅವಧಿಯಲ್ಲಿ 315 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ 117 ಮಂದಿ ಕೇರಳದವರು ಮತ್ತು 36 ಮಂದಿ ಮಹಾರಾಷ್ಟ್ರದವರುಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 12,72,073ಕ್ಕೆ ಏರಿದ್ದು, ಕೋವಿಡ್ ದೃಢ ಪ್ರಮಾಣ 14.78ಕ್ಕೆ ಜಿಗಿದಿದೆ.ದೇಶದಲ್ಲಿ ಸದ್ಯ 5,753 ಓಮೈಕ್ರಾನ್ ಪ್ರಕರಣಗಳಿವೆ.24 ಗಂಟೆಗಳ ಅವಧಿಯಲ್ಲಿ 1,09,345 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಮಧ್ಯಪ್ರದೇಶ- ಶಾಲೆ, ಹಾಸ್ಟೆಲ್‌ ಬಂದ್‌ (ಭೋಪಾಲ್): ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರವು ರಾಜ್ಯದ 1ರಿಂದ 12ನೇ ತರಗತಿವರೆಗಿನ ಎಲ್ಲ ಶಾಲೆ ಮತ್ತು ಹಾಸ್ಟೆಲ್‌ಗಳನ್ನು ಇದೇ 31ರವರೆಗೆ ಮುಚ್ಚುವಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT