ನವದೆಹಲಿ: ದೇಶದಲ್ಲಿ ಹೊಸದಾಗಿ 160 ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,886ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಇಂದು ( ಬುಧವಾರ) ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್–19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಈ ಪೈಕಿ ಕರ್ನಾಟಕ ಹಾಗೂ ಕೇರಳದ ತಲಾ ಒಬ್ಬರು ಎಂದು ವರದಿಯಾಗಿದೆ.

2023ರ ಡಿಸೆಂಬರ್ 5ರವರೆಗೆ ದೈನಂದಿನ ಕೋವಿಡ್–19 ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದಿಂದಾಗಿ ಪ್ರಕರಣಗಳು ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಅಧಿಕೃತ ವೆಬ್ಸೈಟ್ ಪ್ರಕಾರ, ದೇಶದಾದ್ಯಂತ ಕೋವಿಡ್–19 ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಶೇಕಡಾ 98.81ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.