ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Covid -19 Updates | ದೇಶದಲ್ಲಿ 573 ಹೊಸ ಪ್ರಕರಣ: ಕರ್ನಾಟಕದಲ್ಲಿ ಒಂದು ಸಾವು

Published 2 ಜನವರಿ 2024, 10:09 IST
Last Updated 2 ಜನವರಿ 2024, 10:09 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೊಸದಾಗಿ 573 ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,565 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಈ ಪೈಕಿ ಕರ್ನಾಟಕ ಹಾಗೂ ಹರಿಯಾಣದ ತಲಾ ಒಬ್ಬರು ಎಂದು ವರದಿಯಾಗಿದೆ.

2023ರ ಡಿಸೆಂಬರ್ 5ರವರೆಗೆ ದೈನಂದಿನ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದಿಂದಾಗಿ ಪ್ರಕರಣಗಳು ಸಂಖ್ಯೆ ಮತ್ತೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ 2020ರ ಆರಂಭದಲ್ಲಿ ಕೋವಿಡ್‌–19 ಸಾಂಕ್ರಾಮಿಕ ರೋಗದ ಪ್ರಕರಣಗಳು ವರದಿಯಾದವು. ಸುಮಾರು ನಾಲ್ಕು ವರ್ಷಗಳಲ್ಲಿ ರಾಷ್ಟ್ರದಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದರು. ಇದರಲ್ಲಿ 5.3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ, ದೇಶದಾದ್ಯಂತ ಕೋವಿಡ್–19 ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಶೇಕಡಾ 98.81ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT