ನವದೆಹಲಿ: ಮಹಾರಾಷ್ಟ್ರ, ಪಂಜಾಬ್, ಚತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಪ್ರತಿನಿತ್ಯ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೋವಿಡ್ ಉಲ್ಬಣ: ರಾಜ್ಯಕ್ಕೆ ಬರುವವರಿಗೆ ‘ನೆಗೆಟಿವ್’ ಕಡ್ಡಾಯ

ಮಹಾರಾಷ್ಟ್ರದಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ಕಡಿಮೆ ಪ್ರಕರಣಗಳು ವರದಿಯಾಗಿದ್ದವು. ಅದು ಜನವರಿ, ಫೆಬ್ರುವರಿ ಆರಂಭದ ವರೆಗೆ ಅದು ಮುಂದುವರಿದಿತ್ತು. ಆದರೆ, ಫೆಬ್ರವರಿ 16 ರಿಂದ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಜ.1ರ ನಂತರ ಇದೇ ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ಶನಿವಾರ 6 ಸಾವಿರ ಪ್ರಕರಣಗಳು ವರದಿಯಾಗಿವೆ. ಇದೇ ಹೊತ್ತಲ್ಲೇ ಸಾವಿನ ಪ್ರಕರಣಗಳೂ ಏರುತ್ತಿವೆ.

ಅತ್ತ ಪಂಜಾಬ್‌ನಲ್ಲಿಯೂ ಕೊರೊನಾ ವೈರಸ್ ಸೋಂಕು ಪ್ರಕರಣ ಮತ್ತೆ ಏರುಗತಿಯತ್ತ ಮುಖಮಾಡಿದೆ. ಫೆಬ್ರುವರಿ ಆರಂಭದಿಂದಲೂ ಅಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಜ.1ರ ನಂತರ ಇದೇ ಮೊದಲಬಾರಿಗೆ 400 ಪ್ರಕರಣಗಳು ಒಂದೇ ದಿನದಲ್ಲಿ ಕಾಣಿಸಿಕೊಂಡಿದೆ. ಮಧ್ಯಪ್ರದೇಶ ಮತ್ತು ಚತ್ತೀಸಗಢದಲ್ಲಿಯೂ ನಿಧಾನವಾಗಿ ಕೋವಿಡ್ ಉಲ್ಬಣಗೊಳ್ಳುತ್ತಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದೆಯಾದರೂ, ಅದು ಮಹಾರಾಷ್ಟ್ರ ನಂತರದ (ಎರಡನೇ) ಸ್ಥಾನದಲ್ಲೇ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಅಲ್ಲಿ 4,500 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.