ಪಾಲ್ಘರ್: ‘ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಾಂತ ವಾರದ ಸಂತೆ ಮತ್ತು ಸಾಮೂಹಿಕ ಮದುವೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಈ ಕುರಿತಾಗಿ ಜಿಲ್ಲಾಧಿಕಾರಿ ಮಣಿಕ್ ಗುರ್ಸಲ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

‘ಪಾಲ್ಘರ್ ಮತ್ತು ಇತರೆ ಗ್ರಾಮೀಣ ಪ್ರದೇಶಗಳಲ್ಲಿ ವಾರದ ಸಂತೆ ನಡೆಯುತ್ತದೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಫೆಬ್ರುವರಿ 25 ರಿಂದ ಮುಂದಿನ ಆದೇಶ ಬರುವ ತನಕ ವಾರದ ಸಂತೆಯನ್ನು ನಿಷೇಧಿಸಲಾಗಿದೆ. ಅಲ್ಲದೆ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಸೇರುವುದನ್ನು ತಡೆಯಲು ಸಾಮೂಹಿಕ ಮದುವೆಗೂ ನಿರ್ಬಂಧ ಹೇರಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

‘ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್–19 ಮಾರ್ಗಸೂಚಿ ಅನುಸರಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ದಂಡ ವಿಧಿಸಲಾಗುವುದು. ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರು ಮಾತ್ರ ಭಾಗಿಯಾಗಬಹುದು’ ಎಂದು ಅವರು ತಿಳಿಸಿದರು.

‘ಪಾಲ್ಘರ್ ಜಿಲ್ಲೆಯಲ್ಲಿ ಗುರುವಾರ 45 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 45,838ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆಯೂ 1,204ಕ್ಕೆ ತಲುಪಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.