ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ110ಕ್ಕೆ ಏರಿದೆ. ಉತ್ತರಾಖಂಡದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದದ್ದು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಪ್ರಕರಣಗಳ ಒಟ್ಟು ಸಂಖ್ಯೆಯಲ್ಲಿ ದೆಹಲಿ ಮತ್ತು ಕರ್ನಾಟಕದಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳು ಒಳಗೊಂಡಿದ್ದಾರೆ.

ಉತ್ತರಾಖಂಡದಲ್ಲಿ ಮೊದಲ ಕೋವಿಡ್–19 ಪ್ರಕರಣ ಭಾನುವಾರ ವರದಿಯಾಗಿದ್ದು, ದೆಹಲಿಯಲ್ಲಿ ಇದುವರೆಗೆ ಏಳು ಮತ್ತು ಉತ್ತರ ಪ್ರದೇಶದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ 7, ಮಹಾರಾಷ್ಟ್ರ 32, ಲಡಾಖ್‌ನಲ್ಲಿ ಮೂರು ಮತ್ತು ಜಮ್ಮು ಮತ್ತು ಕಾಶ್ಮೀರ ಇಬ್ಬರು ವ್ಯಕ್ತಿಗಳಲ್ಲಿ ಕೋವಿಡ್–19 ಇದೆ ಎಂದು ತಿಳಿದುಬಂದಿದೆ.

ಕೇರಳದಲ್ಲಿ 22, ತೆಲಂಗಾಣದಲ್ಲಿ 3, ರಾಜಸ್ಥಾನದಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.

ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾರಣಾಂತಿಕ ವೈರಸ್ ಅನ್ನು 'ಅಧಿಸೂಚಿತ ವಿಪತ್ತು' ಎಂದು ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.