ಕೋವಿಡ್–19 ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದ ಅವರು, ‘ತೆಲಂಗಾಣದಲ್ಲಿ 1,020 ಹಾಸಿಗೆಗಳ ಪ್ರತ್ಯೇಕ ವಾರ್ಡ್ಗಳು ಸಿದ್ಧವಾಗಿವೆ. ಪ್ರಕರಣಗಳ ಮೇಲ್ವಿಚಾರಣೆಗಾಗಿ ಕಾರ್ಯಪಡೆಯನ್ನು ರಚಿಸಲಾಗಿದೆ. ಕೋಚಿಂಗ್ ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 31ರವರೆಗೆ ಮುಚ್ಚಲಾಗುವುದು’ ಎಂದು ರಾವ್ ಹೇಳಿದ್ದಾರೆ.