ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 80 ಲಕ್ಷ ದಾಟಿದ ಕೊರೊನಾ ಸೋಂಕು ಪ್ರಕರಣ

Last Updated 28 ಅಕ್ಟೋಬರ್ 2020, 16:07 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 80 ಲಕ್ಷ ದಾಟಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಕೇಂದ್ರವೆಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಈ ವರೆಗೆ ಒಟ್ಟು 16,60,766 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 6,738 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 91 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 5,673 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ವರೆಗೆ 3.7 ಲಕ್ಷಕ್ಕೂ ಅಧಿಕ ಪ್ರಕರಣಗಳು ಬೆಳಕಿಗೆ ಬಂದಿವೆ.

ತಮಿಳುನಾಡಿನಲ್ಲಿ 2,516 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,000 ದಾಟಿದೆ.

ಕೇರಳದಲ್ಲಿ ಒಂದೇ ದಿನಕ್ಕೆ 8,790 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು 93,264 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 3,146 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 7,384 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 55 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,12,784ಕ್ಕೆ ಏರಿಕೆಯಾಗಿದೆ. ಆ ಪೈಕಿ 11,046 ಮಂದಿ ಸಾವಿಗೀಡಾಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT