ಮುಂಬೈ: ಮಹಾರಾಷ್ಟ್ರದಲ್ಲಿ ಅಧಿಕಾರಿಯೊಬ್ಬರು ಸೇರಿ 33 ಮಂದಿ ಪೊಲೀಸ್ ಸಿಬ್ಬಂದಿ ಕೋವಿಡ್ನಿಂದಾಗಿ ಮೃತಪಟ್ಟಿದ್ದಾರೆ.
ಈವರೆಗೆ 2,562 ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 196ಮಂದಿ ಅಧಿಕಾರಿಗಳು ಸೇರಿ ಒಟ್ಟು 1,497 ಮಂದಿ ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಲಾಕ್ಡೌನ್ಸಮಯದಲ್ಲಿ 260 ಪೊಲೀಸರಿಗೆ ಮೇಲೆ ದಾಳಿ ನಡೆದಿದ್ದು, 86 ಪೊಲೀಸರು ಗಾಯಗೊಂಡಿದ್ದಾರೆ. ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದವರಿಂದ ₹ 6.62 ಕೋಟಿ ಹಣವನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.