ನವದೆಹಲಿ: ಲಾಕ್‌ಡೌನ್ ಹೇರಿಕೆಯನ್ನು ತಪ್ಪಿಸಬೇಕು. ಲಾಕ್‌ಡೌನ್ ಹೇರಿಕೆಯು ಕೊನೆಯ ಆಯ್ಕೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಕರೆ ಕೊಟ್ಟಿದ್ದಾರೆ.

ದೇಶದಾದ್ಯಂತ ಕೋವಿಡ್ ಪ್ರಕರಣಗಳ ತೀವ್ರ ಹೆಚ್ಚಳ, ವೈದ್ಯಕೀಯ ಆಮ್ಲಜನಕ ಮತ್ತು ಕೋವಿಡ್ ತಡೆ ಲಸಿಕೆ ಕೊರತೆಯ ಹಿನ್ನೆಲೆಯಲ್ಲಿ ಅವರು ದೇಶ ವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ 8.45ಕ್ಕೆ ಮಾತನಾಡಿದರು.

ಈಗ ದೇಶವು ಕೋವಿಡ್ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದೆ. ಹಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಪರಿಸ್ಥಿತಿ ಸುಧಾರಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಮೈಕ್ರೊ ಕಂಟೈನ್‌ಮೆಂಟ್ ವಲಯಗಳ ಮೂಲಕ ಕೋವಿಡ್ ಹರಡುವಿಕೆ ತಡೆ ಸಾಧ್ಯವಿದೆ. ನಾವೆಲ್ಲರೂ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಪಾಲಿಸಿದರೆ ಲಾಕ್‌ಡೌನ್‌ನ ಅಗತ್ಯವೇ ಇರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈಗಿನ ಪರಿಸ್ಥಿತಿ ಭಿನ್ನವಾಗಿದೆ. ಕಳೆದ ವರ್ಷ ನಮಗೆ ಕೋವಿಡ್ ಬಗ್ಗೆ ಹೆಚ್ಚಿನ ತಿಳಿವಳಿಕೆ ಇರಲಿಲ್ಲ. ಈಗ ಹಾಗಲ್ಲ; ಜತೆಗೆ, ಈಗ ಲಸಿಕೆ ಇದೆ. ಪಿಪಿಇ ಕಿಟ್ ಮತ್ತು ಇತರ ವೈದ್ಯಕೀಯ ಸಲಕರಣೆಗಳು ಲಭ್ಯ ಇವೆ ಎಂದು ಅವರು ಹೇಳಿದರು.

ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿದೆ. ಅದೊಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಸವಾಲು ಎದುರಿಸಲು ಸಂಬಂಧಪಟ್ಟ ಎಲ್ಲರೂ ಜತೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.

ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರಂತರ
ವಾಗಿ ಕೆಲಸ ಮಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಔಷಧ ತಯಾರಿಕೆ ಕ್ಷೇತ್ರವನ್ನು ಅವರು ಶ್ಲಾಘಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.