ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿತ್ಯ 50 ಸಾವಿರ ದಾಟುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಲಾಕ್‌ಡೌನ್ ಕುರಿತಂತೆ ಭಾನುವಾರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

ಶನಿವಾರ ಸರ್ವಪಕ್ಷಗಳ ಸಭೆ ನಡೆಸಿರುವ ಅವರು ರಾಜ್ಯದಲ್ಲಿ ಎರಡು ವಾರ ಸಂಪೂರ್ಣ ಲಾಕ್‌ಡೌನ್ ಮಾಡುವ ಸಂಬಂಧ ಚರ್ಚೆ ಮಾಡಿದ್ದಾರೆ. ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳು ಲಾಕ್‌ಡೌನ್ ಮಾಡಲು ಸಮ್ಮತಿ ಸೂಚಿಸಿವೆ ಎನ್ನಲಾಗಿದೆ.

ಲಾಕ್‌ಡೌನ್ ಮಾಡುವ ಸಂಬಂಧ ಈಗಾಗಲೇ ವಿವಿಧ ವಲಯಗಳ ಮುಖಂಡರು, ವೈದ್ಯರ ಜೊತೆ ಚರ್ಚೆ ನಡೆಸಲಾಗಿದ್ದು ಅವರೂ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಉದ್ದವ್ ಠಾಕ್ರೆ ಸರ್ವಪಕ್ಷಗಳ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಓದಿ:ಕೋವಿಡ್ ಲಸಿಕೆ ರಫ್ತು ನಿಷೇಧಿಸಿಲ್ಲ: ವಿದೇಶಾಂಗ ಸಚಿವಾಲಯ

ಹೆಚ್ಚುತ್ತಿರುವ ಸೋಂಕನ್ನು ತಡೆಯಲು ಲಾಕ್‌ಡೌನ್ ಮಾಡುವುದು ಅನಿರ್ವಾಯವಾಗಿದೆ. ಇಲ್ಲವಾದಲ್ಲಿ ಸೋಂಕಿನ ಸರಪಳಿಯನ್ನು ತುಂಡರಿಸಲು ಸಾಧ್ಯವಿಲ್ಲ ಎಂದು ಉದ್ದವ್ ಠಾಕ್ರೆ ಸಭೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಿಎಂ ಕಚೇರಿ ಮೂಲಗಳ ಪ್ರಕಾರ ರಾಜ್ಯದಲ್ಲಿ ಎರಡು ವಾರ ಸಂಪೂರ್ಣ ಲಾಕ್‌ಡೌನ್ ಮಾಡುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ಭಾನುವಾರ ರಾತ್ರಿಯ ವೇಳೆಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.