ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಂಕಷ್ಟ: ಔಷಧ, ಸಾಮಗ್ರಿಗಳ ತೆರಿಗೆ ಮನ್ನಾಕ್ಕೆ ಮಮತಾ ಆಗ್ರಹ

Last Updated 9 ಮೇ 2021, 7:19 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋವಿಡ್‌ ಪಿಡುಗಿನ ವಿರುದ್ಧ ಹೋರಾಡಲು ಇರುವಂತಹ ಎಲ್ಲಾ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳ ಮೇಲಿನ ತೆರಿಗೆ ಮತ್ತು ಸೀಮಾ ಸುಂಕಗಳನ್ನು ಮನ್ನಾ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಬೇಕು, ಕೋವಿಡ್‌ ರೋಗಿಗಳ ಆರೈಕೆಗೆ ಅಗತ್ಯವಾದ ಉಪಕರಣಗಳು, ಔಷಧಗಳು ಮತ್ತು ಆಮ್ಲಜಕ ಸಮರ್ಪಕ ರೀತಿಯಲ್ಲಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಹಲವಾರು ಸಂಘಟನೆಗಳು, ಏಜೆನ್ಸಿಗಳು, ವ್ಯಕ್ತಿಗಳು ನೆರವು ನೀಡಲು ಮುಂದೆ ಬಂದಿದ್ದಾರೆ. ಸೀಮ ಸುಂಕ, ರಾಜ್ಯ ಜಿಎಸ್‌ಟಿ, ಕೇಂದ್ರ ಜಿಎಸ್‌ಟಿ ಮೊದಲಾದ ತೆರಿಗೆಗಳಿಂದ ವಿನಾಯಿತಿ ನೀಡಬೇಕೆಂದು ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ತೆರಿಗೆ ಮನ್ನಾ ಮಾಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಕಾರಣ, ಈ ಬೇಡಿಕೆಗಳನ್ನು ತಕ್ಷಣ ಪರಿಗಣಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT