ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ಕೋವಿಡ್ 19 ಮೂರನೇ ಅಲೆ ಅಪ್ಪಳಿಸಿದ್ದು, ಬುಧವಾರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 10 ಸಾವಿರ ದಾಟುವ ನಿರೀಕ್ಷೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಳ ಮಾಡಲಾಗಿದೆ. ಮಂಗಳವಾರ ಸುಮಾರು 90 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ದೃಢ ಪ್ರಮಾಣ ಶೇಕಡಾ 10ರಷ್ಟಿದೆ. ಕೇವಲ 300-400 ಮಾದರಿಗಳನ್ನಷ್ಟೇ ಜೀನೋಮ್ ಸೀಕ್ವೆನ್ಸಿಂಗ್‌ಗೆ (ವೈರಾಣು ಸಂರಚನೆ ವಿಶ್ಲೇಷಣೆ) ಕಳುಹಿಸಲಾಗುತ್ತಿದೆ. ಎಲ್ಲ ಮಾದರಿಗಳನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಸತ್ಯೇಂದರ್ ತಿಳಿಸಿದ್ದಾರೆ.

ದೆಹಲಿ ಸರ್ಕಾರ ಮಂಗಳವಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದ್ದು, ನೌಕರರಿಗೆ ಮನೆಯಲ್ಲೇ ಕೆಲಸ ಮಾಡುವ ಅವಕಾಶ ನೀಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೆ ನಿಷೇಧ ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಫ್ಯೂ ಹೊರತು ಪಡಿಸಿ ಉಳಿದ ದಿನಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ.

ಮಂಗಳವಾರ 5,481 ಹೊಸ ಕೋವಿಡ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ವಾರಾಂತ್ಯ ಕರ್ಫ್ಯೂ ಘೋಷಣೆ ನಿರ್ಧಾರವನ್ನು ದೆಹಲಿ ಸರ್ಕಾರ ಕೈಗೊಂಡಿದೆ.

ರಾಷ್ಟ್ರದ 58,097 ಮಂದಿಗೆ ಕೋವಿಡ್, 4 ದಿನದಲ್ಲಿ ದ್ವಿಗುಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.