ನವದೆಹಲಿ: ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳು ಭಾರತದಲ್ಲಿ ಗುರುವಾರ ಸತತ 10ನೇ ದಿನದಂದೂ 10 ಲಕ್ಷಕ್ಕಿಂತ ಕಡಿಮೆ ಇವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಗುಣಮುಖ ಪ್ರಕರಣಗಳು ಕೂಡ ಹೆಚ್ಚಾಗಿವೆ. 24 ಗಂಟೆಗಳ ಅವಧಿಯಲ್ಲಿ 85,376 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟಾರೆ 52,73,201 ಮಂದಿ ಅಂದರೆ ಶೇ 83.53 ರಷ್ಟು ಮಂದಿ ಗುಣಮುಖ ಹೊಂದಿದ್ದಾರೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ದೇಶದಲ್ಲಿ 9,40,705 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಶೇ 76ರಷ್ಟು ಪ್ರಕರಣಗಳು ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳಲ್ಲಿವೆ.

ಕೇವಲ 12 ದಿನಗಳಲ್ಲಿ 10ಲಕ್ಷದಷ್ಟು ಮಂದಿ ಗುಣಮುಖರಾಗಿದ್ದಾರೆ. ಗುಣಮುಖರಾಗುವ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಿದೆ.

ಒಟ್ಟು ಗುಣಮುಖರಾದ ಪ್ರಕರಣಗಳ ಪೈಕಿ ಶೇ 77ರಷ್ಟು ಪ್ರಕರಣಗಳು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಉತ್ತರಪ್ರದೇಶ, ದೆಹಲಿ, ಪಶ್ಚಿಮಬಂಗಾಳ, ಒಡಿಶಾ, ಬಿಹಾರ ಮತ್ತು ತೆಲಂಗಾಣ ರಾಜ್ಯಗಳಿಗೆ ಸೇರಿವೆ ಎಂದು ಸಚಿವಾಲಯ ಹೇಳಿದೆ.

ಗುಣಮುಖರಾಗುವ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ನಂತರದ ಸ್ಥಾನಗಳಲ್ಲಿ ಆಂಧ್ರಪ್ರದೇಶ ಮತ್ತು ತಮಿಳುನಾಡು ಇದೆ ಎಂದು ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.