ನವದೆಹಲಿ: ದೇಶದಾದ್ಯಂತ ಸೋಮವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 40,134 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 422 ಮಂದಿ ಸಾವಿಗೀಡಾಗಿದ್ದು, 36,946 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣಕ್ಕಿಂತ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ.

ಒಟ್ಟು 3,16,95,958 ಪ್ರಕರಣಗಳ ಪೈಕಿ, ಈವರೆಗೂ 3,08,57,467 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,24,773 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಪ್ರಸ್ತುತ 4,13,718 ಪ್ರಕರಣಗಳು ಸಕ್ರಿಯವಾಗಿವೆ.

ಕಳೆದ 24 ಗಂಟೆಗಳಲ್ಲಿ 17,06,598 ಡೋಸ್ಗಳಷ್ಟು ಲಸಿಕೆ ಹಾಕಲಾಗಿದೆ ಮತ್ತು 14,28,984 ಗಂಟಲು ದ್ರವ ಮಾದರಿ ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಒಟ್ಟು 47.22 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಕೇರಳದಲ್ಲಿ 1,67,891 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 82,350 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 24,168 ಪ್ರಕರಣಗಳು ಸಕ್ರಿಯವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.