ನವದೆಹಲಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ತಯಾರಿಸಿರುವ, ಆಕಳಿನ ಸಗಣಿಯಿಂದ ಮಾಡಿದ ಸೋಪ್ ಹಾಗೂ ಬಿದಿರು ಬಳಸಿ ಮಾಡಿರುವ ನೀರಿನ ಬಾಟಲಿಗಳನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಬಿಡುಗಡೆ ಮಾಡಿದರು.

ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಯೋಗ ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಅದರಲ್ಲೂ, ಸಾವಯವ ಉತ್ಪನ್ನಗಳಿಗೆ ಭಾರಿ ಬೇಡಿಕೆ ಇದೆ’ ಎಂದರು.

‘ಉತ್ಪಾದನಾ ಚಟುವಟಿಕೆಯಲ್ಲಿ ವೃತ್ತಿಪರತೆ, ಪಾರದರ್ಶಕತೆ ಮತ್ತು ಗುಣಮಟ್ಟ ಕಾಪಾಡುವುದು ಮುಖ್ಯ. ಈ ಪ್ರಕ್ರಿಯೆಯಲ್ಲಿ ಮಹಾತ್ಮ ಗಾಂಧಿ ಪ್ರತಿಪಾದಿಸಿರುವ ಆರ್ಥಿಕ ಚಿಂತನೆಗಳೊಂದಿಗೆ ರಾಜಿ ಆಗಕೂಡದು’ ಎಂದು ಗಡ್ಕರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.