ನವದೆಹಲಿ: ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ನವದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡರು.

2019ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಕನ್ಹಯ್ಯ ಕುಮಾರ್, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸೇರಿದ್ದರು. ತಮ್ಮ ತವರು ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ದಲಿತ ನಾಯಕರಾಗಿರುವ, ಜಿಗ್ನೇಶ್ ಮೇವಾನಿ ಸದ್ಯ ಗುಜರಾತ್ನ ವಡ್ಗಾಮ್ ಕ್ಷೇತ್ರದ ಶಾಸಕರೂ ಹೌದು.

ಬಿಹಾರದಲ್ಲಿ ಕಾಂಗ್ರೆಸ್ಗೆ ಚೈತನ್ಯ ನೀಡಲು ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.