ಲತೇಹಾರ್(ಜಾರ್ಖಂಡ್): ‘ಜಾರ್ಖಂಡ್ನ ಲತೇಹಾರ್ ಜಿಲ್ಲೆಯಲ್ಲಿ ಸೋಮವಾರ ಮಾವೋವಾದಿ ಮತ್ತು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಮನೀಶ್ ಯಾದವ್ ಹತನಾಗಿದ್ದಾನೆ’ ಎಂದು ಡಿಐಜಿ ವೈ.ಎಸ್.ರಮೇಶ್ ತಿಳಿಸಿದರು.

ಭಾನುವಾರ ರಾತ್ರಿ ಮೌಹದಂದ್ ಪೊಲೀಸ್ ಠಾಣೆ ವ್ಯಾಪ್ತಿಯ ದೌನಾದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.

‘ತಲೆಗೆ ₹5 ಲಕ್ಷ ಬಹುಮಾನ ಘೋಷಿಸಲಾಗಿದ್ದ ಮನೀಶ್ ಯಾದವ್ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಮಾವೋವಾದಿ ಕುಂದನ್ ಖೇರ್ವಾರ್ನನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.

ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ಮಾವೋವಾದಿಗಳು ಹತರಾಗಿದ್ದರು. ಲೋಹ್ರಾ ತಲೆಗೆ ₹10 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.