ತಿರುವನಂತಪುರಂ/ಚೆನ್ನೈ: ಸಿಪಿಎಂ ಪಕ್ಷದ ಹಿರಿಯ ನಾಯಕ, ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು. ಅವರಿಗೆ 69 ವರ್ಷವಾಗಿತ್ತು.

ಕ್ಯಾನ್ಸರ್ ಪೀಡಿತರಾಗಿದ್ದ ಅವರು ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಪಾಲಿಟ್ ಬ್ಯೂರೊ ಸದಸ್ಯರೂ ಆಗಿದ್ದ ಬಾಲಕೃಷ್ಣನ್, 2015ರಿಂದ 2022ರವರೆಗೂ ಪಕ್ಷದ ಕೇರಳ ಘಟಕದ ಕಾರ್ಯದರ್ಶಿಯಾಗಿದ್ದರು.

2006 ರಿಂದ 2011ರ ಅವಧಿಯಲ್ಲಿ ವಿ.ಎಸ್.ಅಚ್ಯುತಾನಂದನ್ ನೇತೃತ್ವದ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.