ನವದೆಹಲಿ: ಸಿಪಿಎಂನ ಹಂಗಾಮಿ ಸಂಯೋಜಕರನ್ನಾಗಿ ಹಿರಿಯ ನಾಯಕ ಪ್ರಕಾಶ್ ಕಾರಟ್ ಅವರನ್ನು ನೇಮಕ ಮಾಡಲಾಗಿದೆ.
ಮುಂದಿನ ವರ್ಷದ ಏಪ್ರಿಲ್‌ನಲ್ಲಿ ಮದುರೈನಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ. ಅಲ್ಲಿಯವರೆಗೆ ಪ್ರಕಾಶ್ ಕಾರಟ್ ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ.
ಸೀತಾರಾಮ್ ಯೆಚೂರಿ ನಿಧನದಿಂದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ಖಾಲಿ ಇದೆ. ಸದ್ಯಕ್ಕೆ ಪ್ರಕಾಶ್ ಕಾರಟ್ ಅವರು ಪಾಲಿಟ್ ಬ್ಯೂರೊ ಮತ್ತು ಕೇಂದ್ರ ಸಮಿತಿಯ ನಡುವೆ ಸಂಯೋಜಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.