ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೋಟಾ ಶಕೀಲ್ ಬಾವ ಸಾವು

Published 22 ಜೂನ್ 2024, 15:57 IST
Last Updated 22 ಜೂನ್ 2024, 15:57 IST
ಅಕ್ಷರ ಗಾತ್ರ

ಮುಂಬೈ‌: ಭೂಗತ ಪಾತಕಿ ಚೋಟಾ ಶಕೀಲ್‌ನ ಬಾವ ಆರಿಫ್ ಅಬೂಬಕರ್ ಶೇಖ್ ಅಲಿಯಾಸ್ ಆರಿಫ್ ಭಾಯಿಜಾನ್ ಮೃತಪಟ್ಟಿದ್ದಾನೆ. ಈತ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸುವ ಒಂದು ಪ್ರಕರಣದಲ್ಲಿ ವಿಚಾರಣಾಧೀನ ಕೈದಿ ಕೂಡ ಆಗಿದ್ದ.

ಶೇಖ್ ಮತ್ತು ಆತನ ಸಹೋದರ ಶಬ್ಬೀರ್‌ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು 2023ರ ಮೇ ತಿಂಗಳಲ್ಲಿ ಬಂಧಿಸಿದ್ದರು. ಶೇಖ್‌ನನ್ನು ಅರ್ಥರ್‌ ರೋಡ್ ಜೈಲಿನಲ್ಲಿ ಇರಿಸಲಾಗಿತ್ತು. ಶೇಖ್‌ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಎಂದು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT