ಮುಂಬೈ: ಅಪ್ರಾಪ್ತ ವಯಸ್ಸಿನ ಇಬ್ಬರು ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ ಅವರನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಘಟನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

54 ವರ್ಷದ ಬಾಣಸಿಗ ಅಜಯ್ ದಾಸ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು ಈತನನ್ನು ಪೊಲೀಸರು ಬಂಧಿಸಿದ್ದಾರೆ.

9 ಮತ್ತು 8 ವರ್ಷದ ಇಬ್ಬರು ಸಹೋದರಿಯರು ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಹುಡುಕಾಟ ನಡೆಸಿದಾಗ ಬಾಲಕಿಯರ ಮೃತದೇಹಗಳು ನೀರಿನ ಡ್ರಮ್ವೊಂದರಲ್ಲಿ ಪತ್ತೆಯಾಗಿವೆ. ಬಾಲಕಿಯರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.