ಮುಂಬೈ: ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಪಕ್ಷದ ‘ದ್ರೋಹಿ’ಗಳನ್ನು ಪತ್ತೆ ಮಾಡಿ, ಶಿಕ್ಷೆ ನೀಡಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದರು.

ಈ ದ್ರೋಹಿಗಳಿಂದಲೇ ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ನಾಯಕ ಚಂದ್ರಕಾಂತ್ ಹಂಡೋರೆ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿದ್ದರು ಎಂದು ಶನಿವಾರ ಹೇಳಿದರು.

‘ವಿಶ್ವಾಸಘಾತುಕರನ್ನು ಪತ್ತೆ ಮಾಡಿ ಶಿಕ್ಷೆ ನೀಡಲಾಗುವುದು. ಮುಂದೆ ಯಾರೂ ಇಂಥ ಧೈರ್ಯ ತೋರಬಾರದು’ ಎಂದರು.

11 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಒಂಬತ್ತು ಸ್ಥಾನಗಳಲ್ಲಿ ಬಿಜೆಪಿ, ಶಿವಸೇನಾ (ಶಿಂದೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಗೆದ್ದಿದೆ. ಇದರಿಂದ ವಿರೋಧ ಪಕ್ಷಗಳ ಒಕ್ಕೂಟ ‘ಮಹಾ ವಿಕಾಸ ಅಘಾಡಿ’ಗೆ ಹಿನ್ನಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.