ಕೋಲ್ಕತ್ತ : ಪಶ್ಚಿಮ ಬಂಗಾಳದ ಬಸಂತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಏಳು ವರ್ಷದ ಬಾಲಕನಿಗೆ ಗಂಭೀರ ಗಾಯಗಳಾಗಿವೆ.

ಬಾಲಕ ಬುಧವಾರ ಸಂಜೆ ಕಟ್ಟಡದ ಅಂಗಳದಲ್ಲಿ ಆಟವಾಡುತ್ತ, ವೃತ್ತಾಕಾರದ ವಸ್ತುವೊಂದನ್ನು ಮುಟ್ಟಿದ್ದಾನೆ. ಬಳಿಕ ಅದು ಸ್ಫೋಟಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು, ‘ಇದು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಕಟ್ಟಡದ ಮಾಲೀಕ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಉದ್ಯಮಿಯೊಬ್ಬರು ಕಟ್ಟಡದ ಮಾಲೀಕರಾಗಿದ್ದು, ಅವರಿಗೆ ತಿಳಿಯದಂತೆ ಬಾಂಬ್ ಸಂಗ್ರಹಿಸಲು ಸಾಧ್ಯವಿಲ್ಲ’ ಎಂದು ಕೆಲವು ಸ್ಥಳೀಯರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.