ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಪ್ಟೋಕರೆನ್ಸಿ ನಿಷೇಧ: ಸ್ಥಾಯಿ ಸಮಿತಿ ವಿರೋಧ

Last Updated 15 ನವೆಂಬರ್ 2021, 20:13 IST
ಅಕ್ಷರ ಗಾತ್ರ

ನವದೆಹಲಿ:ಕ್ರಿಪ್ಟೋಕರೆನ್ಸಿ ನಿಷೇಧಿಸುವ ಬದಲಾಗಿ, ಅದಕ್ಕೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹಣಕಾಸು ಕುರಿತ ಸಂಸದೀಯ ಸ್ಥಾಯಿ ಸಮಿತಿಯ ಹಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಮುಖಂಡ ಜಯಂತ್ ಸಿನ್ಹಾ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕ್ರಿಪ್ಟೋಕರೆನ್ಸಿ ವಹಿವಾಟಿನ ಸಾಧಕ–ಬಾಧಕಗಳ ಕುರಿತು ಚರ್ಚೆ ನಡೆಯಿತು.

ಕ್ರಿಪ್ಟೋಕರೆನ್ಸಿ ಬಗ್ಗೆ ದೇಶದಲ್ಲಿ ದೊಡ್ಡ ಚರ್ಚೆಯಾಗುತ್ತಿರುವ ಸಮಯದಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ದೇಶದಲ್ಲಿ ಕ್ರಿಪ್ಟೋಕರೆನ್ಸಿ ಬಳಕೆಗೆ ನಿರ್ದಿಷ್ಟ ನಿಯಂತ್ರಣ ಕ್ರಮಗಳು ಅಥವಾ ನಿಷೇಧ ಆದೇಶಗಳು ಜಾರಿಯಲ್ಲಿಲ್ಲ.

ಕ್ರಿಪ್ಟೋ ವಿನಿಮಯ ಕೇಂದ್ರಗಳು, ಬ್ಲಾಕ್‌ಚೈನ್ ಮತ್ತು ಕ್ರಿಪ್ಟೋ ಅಸೆಟ್ಸ್ ಕೌನ್ಸಿಲ್ (ಬಿಎಸಿಸಿ), ಉದ್ಯಮ ಸಂಸ್ಥೆಗಳು ಮತ್ತು ಶಿಕ್ಷಣ ತಜ್ಞರು ಮತ್ತು ಇದಕ್ಕೆ ಸಂಬಂಧಪಟ್ಟವರು ಸ್ಥಾಯಿಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬೆನ್ನಲ್ಲೇ ಈ ಸಭೆ ನಡೆದಿದೆ.ಸ್ಥಾಯಿ ಸಮಿತಿಯ ಸಭೆಯಲ್ಲಿ ಕ್ರಿಪ್ಟೋಕರೆನ್ಸಿಯ ಬಗ್ಗೆ ಚರ್ಚೆ ಆಗಿದ್ದು ಇದೇ ಮೊದಲು.

ಕ್ರಿಪ್ಟೋಕರೆನ್ಸಿ ನಿಷೇಧದಲ್ಲಿ ಹಲವು ಸವಾಲುಗಳಿವೆ ಎಂದು ಸಮಿತಿಯಲ್ಲಿದ್ದ ಕಾಂಗ್ರೆಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಕ್ರಿಪ್ಟೋವನ್ನು ಹೇಗೆ ನಿಯಂತ್ರಣಕ್ಕೆ ತರಲು ಸಾಧ್ಯ ಎಂದು ಸದಸ್ಯರೊಬ್ಬರು ಅಚ್ಚರಿ ವ್ಯಕ್ತಡಿಸಿದರು. ಇದು ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಲು ಬಳಕೆಯಾಗುವ ಅಪಾಯವೂ ಇದೆ ಎಂದು ಕೆಲವು ಸದಸ್ಯರು ಆತಂಕ ವ್ಯಕ್ತಪಡಿಸಿದರು.

ಕ್ರಿಪ್ಟೋಕರೆನ್ಸಿ ಕುರಿತ ಮಸೂದೆಯು ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT