ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ನೋಟಿಸ್‌

Last Updated 1 ನವೆಂಬರ್ 2021, 10:46 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮತ್ತಿತರರನ್ನು ಆರೋಪದಿಂದ ಖುಲಾಸೆಗೊಳಿಸಿರುವ ಆದೇಶವನ್ನು ಪ್ರಶ್ನಿಸಿ ಮಾಜಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕೇಜ್ರಿವಾಲ್ ಸೇರಿದಂತೆ ಇತರೆ 10 ಮಂದಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ಹನ್ನೊಂದು ಮಂದಿಯನ್ನು ಬಿಡುಗಡೆಗೊಳಿಸಿ ಆ. 11ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 9 ಜನರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 26ರ ಒಳಗೆ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

2018ರ ಫೆಬ್ರವರಿ 19 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ಅಂದಿನ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಅಂಶು ಪ್ರಕಾಶ್‌ ಅವರ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಹಲವು ರಾಜಕಾರಣಿಗಳನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT