ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 15–31ವರೆಗೆ ಸಿಯುಇಟಿ ಪರೀಕ್ಷೆ

Published 27 ಫೆಬ್ರುವರಿ 2024, 16:02 IST
Last Updated 27 ಫೆಬ್ರುವರಿ 2024, 16:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು, ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಯುಇಟಿ) ಮೇ 15 ರಿಂದ 31ರವರೆಗೆ ಎರಡು ಅಥವಾ ಮೂರು ಪಾಳಿಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗುತ್ತದೆ.

ಈ ಪರೀಕ್ಷೆಯ ಫಲಿತಾಂಶವನ್ನು ಜೂನ್‌ 30ರಂದು ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಮಂಗಳವಾರ ಪ್ರಕಟಿಸಿದೆ. ಸಿಯುಇಟಿ ಅನ್ನು ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತದೆ. ದೇಶದಲ್ಲಿ 380 ಮತ್ತು ವಿದೇಶಗಳಲ್ಲಿರುವ 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದ್ದು, ಮಾರ್ಚ್‌ 26ರವರೆಗೆ ನಡೆಯಲಿದೆ. ಪರೀಕ್ಷೆಯನ್ನು ಕಂಪ್ಯೂಟರ್ ಆಧರಿತ ಪರೀಕ್ಷೆ (ಸಿಬಿಟಿ) ಅಥವಾ ಪೆನ್‌ ಮತ್ತು ಪೇಪರ್‌ ಮಾದರಿಯಲ್ಲಿ ನಡೆಸಬೇಕೇ ಎಂಬುದು ಸೇರಿ ವಿವಿಧ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪರೀಕ್ಷಾರ್ಥಿಗಳಿಗೆ ಗರಿಷ್ಠ ಆರು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಪರೀಕ್ಷೆ ನೋಂದಾಯಿಸುವ ವಿದ್ಯಾರ್ಥಿಗಳ ಸಂಖ್ಯೆ, ಆಯ್ಕೆ ಮಾಡಿಕೊಳ್ಳುವ ವಿಷಯಗಳನ್ನು 2 ಅಥವಾ 3 ಪಾಳಿಗಳಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT