ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ರಾತ್ರಿ ಕರ್ಫ್ಯೂ ಅವಧಿ ಎರಡು ಗಂಟೆ ಹೆಚ್ಚಳ

Last Updated 16 ಮಾರ್ಚ್ 2021, 10:03 IST
ಅಕ್ಷರ ಗಾತ್ರ

ಅಹಮದಾಬಾದ್‌: ಕೋವಿಡ್‌ ಪ್ರಸರಣವನ್ನು ತಡೆಯಲು ರಾಜ್ಯದ ಪ್ರಮುಖ ನಾಲ್ಕು ನಗರಗಳಲ್ಲಿ ಕರ್ಫ್ಯೂ ಸಮಯವನ್ನು ಎರಡು ಗಂಟೆಗಳ ಕಾಲ ಹೆಚ್ಚಿಸಲು ಗುಜರಾತ್‌ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಅಹಮದಾಬಾದ್‌, ಸೂರತ್‌, ವಡೋದರ ಮತ್ತು ರಾಜ್‌ಕೋಟ್‌ನಲ್ಲಿ ರಾತ್ರಿ 12 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ರಾತ್ರಿ ಕರ್ಫ್ಯೂ ಹೇರಲಾಗಿತ್ತು. ಇದೀಗ ಈ ಸಮಯವನ್ನು ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ.

ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಕೊರೊನಾ ಕಾರ್ಯಪಡೆಯ ಪ್ರಮಖ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.

‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಕರ್ಪ್ಯೂ ಸಮಯವನ್ನು 10 ರಿಂದ 6 ತನಕ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ರಾತ್ರಿ ಕರ್ಫ್ಯೂ ಮಾರ್ಚ್‌ 31 ತನಕ ಜಾರಿಯಲ್ಲಿ ಇರಲಿದೆ’ ಎಂದು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.

‘ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವೆ ನಡೆಯಲಿರುವ ಮುಂದಿನ ಮೂರು ಟಿ–20 ಪಂದ್ಯಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶವಿಲ್ಲ’ ಎಂದು ಗುಜರಾತ್‌ ಕ್ರಿಕೆಟ್‌ ಅಸೋಸಿಯೇಷನ್‌(ಜಿಸಿಎ) ಸೋಮವಾರ ತಿಳಿಸಿದೆ.

ನಗರದ 8 ವಾರ್ಡ್‌ಗಳಲ್ಲಿರುವ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ಮಾಲ್‌ಗಳನ್ನು ರಾತ್ರಿ 10 ಗಂಟೆಯೊಳಗೆ ಮುಚ್ಚುವಂತೆ ಅಹಮದಾಬಾದ್‌ ಮಹಾನಗರ ಪಾಲಿಕೆಯು ಸೋಮವಾರ ಸೂಚಿಸಿದೆ.

ಗುಜರಾತ್‌ನಲ್ಲಿ ಸೋಮವಾರ 890 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 2,79,097 ಕ್ಕೆ ಏರಿಕೆಯಾಗಿದೆ.

ಗುಜರಾತ್‌ನಲ್ಲಿ ಸೂರತ್‌ ನಗರದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT