ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ದ್ವಾನಿ ಹಿಂಸಾಚಾರ: ಕರ್ಫ್ಯೂ ತೆರವು

Published 20 ಫೆಬ್ರುವರಿ 2024, 4:58 IST
Last Updated 20 ಫೆಬ್ರುವರಿ 2024, 4:58 IST
ಅಕ್ಷರ ಗಾತ್ರ

ಡೆಹರಾಡೂನ್‌: ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆ ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. 

12 ದಿನಗಳ ಬಳಿಕ ಮಂಗಳವಾರ ಬೆಳಿಗ್ಗೆ 5 ಗಂಟೆಯಿಂದ ಜಾರಿಗೆ ಬರುವಂತೆ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ. 8 ರಂದು ಬನ್‌ಭೂಲ್‌ಪುರದಲ್ಲಿ ಮದರಸಾ ಕೆಡವಿದ ಹಿನ್ನೆಲೆ ಹಿಂಸಾಚಾರ ಭುಗಿಲೆದ್ದಿತು. ಸ್ಥಳೀಯರು ಪುರಸಭೆಯ ಕಾರ್ಮಿಕರು ಮತ್ತು ಪೊಲೀಸರ ಮೇಲೆ ಕಲ್ಲು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ‌ಪೊಲೀಸ್ ಸಿಬ್ಬಂದಿಯಿದ್ದ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. 

ಹಿಂಸಾಚಾರದಲ್ಲಿ, ಆರು ಮಂದಿ ಗಲಭೆಕೋರರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 68 ಜನರನ್ನು ಬಂಧಿಸಲಾಗಿದ್ದು, ಅವರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT