ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಪುರ: ಫೆಬ್ರುವರಿ 24ರಿಂದ ಎಐಸಿಸಿ ಮಹಾ ಅಧಿವೇಶನ

Last Updated 2 ಜನವರಿ 2023, 14:31 IST
ಅಕ್ಷರ ಗಾತ್ರ

ನವದೆಹಲಿ: ಛತ್ತೀಸಗಢದ ರಾಯಪುರದಲ್ಲಿ ಫೆಬ್ರುವರಿ 24ರಿಂದ 26ರವರೆಗೆ ನಡೆಯಲಿರುವ ಮೂರು ದಿನಗಳ ಎಐಸಿಸಿ ಮಹಾ ಅಧಿವೇಶನದಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯುಸಿ) ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್‌ ಸೋಮವಾರ ಹೇಳಿದ್ದಾರೆ.

‘ಸಿಡಬ್ಲ್ಯುಸಿಗೆ ಚುನಾವಣೆ ನಡೆಸುವ ಬಗ್ಗೆ ಈ ಹಿಂದೆ ಪಕ್ಷವು ಸ್ಪಷ್ಟವಾಗಿ ಘೋಷಿಸಿರಲಿಲ್ಲ. ಅಧಿವೇಶನದ ಜೊತೆಗೇ ಚುನಾವಣೆ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

‘ರಾಜಕೀಯ, ಆರ್ಥಿಕತೆ, ಅಂತರರಾಷ್ಟ್ರೀಯ ವ್ಯವಹಾರಗಳು, ರೈತರು ಮತ್ತು ಕೃಷಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಯುವಜನತೆ, ಶಿಕ್ಷಣ ಮತ್ತು ಉದ್ಯೋಗ ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ’ ಎಂದೂ ಅವರು ಹೇಳಿದ್ದಾರೆ.

ಸಾಂವಿಧಾನಿಕ ತಿದ್ದುಪಡಿಗಳ ಸಮಿತಿಯೊಂದನ್ನು ಅಧಿವೇಶನದಲ್ಲಿ ರಚಿಸಲಾಗುವುದು. ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆಯ ಬಳಿಕ ಇದು ಕಡ್ಡಾಯವಾಗಿದೆ ಎಂದೂ ವಿವರಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯನ್ನು ಅಂಗೀಕರಿಸುವ ಅಧಿವೇಶನವು ರಾಯಪುರದಲ್ಲಿ ಫೆಬ್ರುವರಿ ತಿಂಗಳಲ್ಲಿ ನಡೆಯಲಿದೆ ಎಂದು ಡಿಸೆಂಬರ್‌ 4ರಂದು ನಡೆದಿದ್ದ ಕಾಂಗ್ರೆಸ್‌ ಸಂಚಾಲನಾ ಸಮಿತಿ ಸಭೆಯ ಬಳಿಕ ಪಕ್ಷವು ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT