ಹೈದರಾಬಾದ್: ದೇಶದಲ್ಲಿ ಸೈಬರ್ ಅಪರಾಧಗಳು ದೊಡ್ಡ ಬೆದರಿಕೆಯಾಗಿ ಹೊರಹೊಮ್ಮಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಶುಕ್ರವಾರ ಹೇಳಿದ್ದಾರೆ.
ಇಲ್ಲಿನ ಹೊರವಲಯದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ತಾಂತ್ರಿಕ ಪರಿಣತಿಯೊಂದಿಗೆ ಸೈಬರ್ ಅಪರಾಧಗಳ ಸವಾಲನ್ನು ಎದುರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕರೆ ನೀಡಿದರು.
ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 76ನೇ ಬ್ಯಾಚ್‌ನ 207 ಅಧಿಕಾರಿಗಳು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಪೈಕಿ 58 ಮಹಿಳಾ ಅಧಿಕಾರಿಗಳು ತರಬೇತಿ ಪಡೆಯುತ್ತಿದ್ದಾರೆ.